alex Certify ಭಾರಿ ಮಳೆ ಮುನ್ಸೂಚನೆ: 8 ಜಿಲ್ಲೆಗಳಿಗೆ ರೆಡ್ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆ ಮುನ್ಸೂಚನೆ: 8 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ದಕ್ಷಿಣ ಒಳನಾಡಿನ ಅನೇಕ ಕಡೆ ವ್ಯಾಪಕ ಮಳೆಯಾಗುತ್ತಿದ್ದು, ಸೋಮವಾರ ಕೂಡ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 24ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಹಾಸನ, ಕೊಡಗು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂ. 25ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಗದಗ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...