alex Certify Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆ.3 ರಂದು ಇಂದು ಬೀದರ್ , ಕಲಬುರಗಿ, ಹಾಗೂ ಸೆ.4 ರಂದು ನಾಳೆ ಕಲಬುರಗಿ, ಬಾಗಲಕೋಟೆ, ಕೊಪ್ಪಳ ಜಿಲ್ಲೆಯಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅದೇ ರೀತಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದೇ ರೀತಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ರಾಮನಗರ ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗ ಸಹಿತ ಭಾರೀ ಮಳೆಯಾಗಿದೆ. ಇಂದು ಸಹ ವರುಣನ ಆರ್ಭಟ ಮುಂದುವರೆಯಲಿದೆಯಂತೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...