alex Certify ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರ ನೀಡಲು ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರ ನೀಡಲು ಸರ್ಕಾರ ಆದೇಶ

ಬೆಂಗಳೂರು: 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ(1ನೇ ಜೂನ್ ದಿಂದ 30ನೇ ಸೆಪ್ಟೆಂಬರ್ ರವರೆಗೆ) ಉಂಟಾಗುವ ಅತಿವೃಷ್ಟಿ /ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ /ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರವನ್ನು ನೀಡಲು ಸರ್ಕಾರದಿಂದ ನಿರ್ದೇಶನ ನೀಡಲಾಗಿದೆ.

ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ತಿಗೆ ಕನಿಷ್ಠ 6,500 ರೂ. ಗಳಿಂದ ಗರಿಷ್ಟ 50,000 ರೂ.ಗಳನ್ನು ಮಾನದಂಡಗಳ ಅರ್ಹತೆಯನುಸಾರ ಪಾವತಿಸುವುದು;

ಅತಿವೃಷ್ಟಿ/ಪ್ರವಾಹದಿಂದ ಮನೆಯ ಗೋಡೆಗಳೊಂದಿಗೆ ಮೇಲ್ಮಾವಣಿ ಕುಸಿತ (Walls and roof collapse) (ಶೇ.75% ಕ್ಕಿಂತ ಹೆಚ್ಚು) ಹಾನಿಯಾದ ಮನೆಗಳನ್ನು ಸಂಪೂರ್ಣ ಹಾನಿಯಾದ ಮನೆಯೆಂದು ಪರಿಗಣಿಸಬೇಕು.

ಮನೆಹಾನಿಯ ಪ್ರಮಾಣವನ್ನು ಗ್ರಾಮ ಆಡಳಿತಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಹಾಯಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಇವರುಗಳು ಜಂಟಿಯಾಗಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸುವುದು. ನಿಗದಿಪಡಿಸಿರುವ ಕಾಲಮಿತಿಯೊಳಗೆ ನಿಯಮಾನುಸಾರ ಅರ್ಹ ಸಂತ್ರಸ್ಥರಿಗೆ ಪರಿಹಾರ ಪಾವತಿಸಲು ಕ್ರವಹಿಸುವುದು.

ಭಾಗಶಃ ಮನೆ ಹಾನಿಗಾಗಿ 50,000 ರೂ. ಗಳವರೆಗೆ ಪಾವತಿಸಲಾಗುವ ಮನೆ ಹಾನಿ ಪರಿಹಾರ ಪಡೆಯುವ ಸಂತ್ರಸ್ತರ ವಿವರಗಳಾದ, ಹಾನಿಯಾದ ಮನೆಯ ಜಿ.ಪಿ.ಎಸ್. ಛಾಯಾಚಿತ್ರ, ಆರ್.ಆರ್. ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು RGRHCL ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲು ಜಿಲ್ಲಾಧಿಕಾರಿಗಳು ಕ್ರಮವಹಿಸತಕ್ಕದ್ದು.

ಪೂರ್ಣ ಹಾನಿಯಾದ ಮನೆಗಳಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ 1.20 ಲಕ್ಷ ರೂ. ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ದೇವರಾಜ್ ಅರಸು ವಸತಿ ಯೋಜನೆಯಡಿ ಮನೆ ಹಂಚಿಕೆ ಪತ್ರವನ್ನು ಜಿಲ್ಲಾಧಿಕಾರಿಗಳ ಹಂತದಲ್ಲಿಯೇ RGRHCL ತಂತ್ರಾಂಶದ ಮೂಲಕ ವಿತರಿಸತಕ್ಕದ್ದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...