ಬೆಂಗಳೂರು : ಕರಾವಳಿ ಕರ್ನಾಟಕ, ಬೆಂಗಳೂರಿನಲ್ಲಿ ನಾಳೆಯಿಂದ 3 ದಿನ ಭಾರಿ ‘ಮಳೆ’ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿ ಭಾಗದಲ್ಲಿ ಗಂಟೆಗೆ 40-45 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅದೇ ರೀತಿ ನಾಳೆಯಿಂದ ಶನಿವಾರದವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.