alex Certify Rai Alert Karnataka : ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ : ‘ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rai Alert Karnataka : ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ 3 ಜಿಲ್ಲೆಗಳಲ್ಲಿ ಇಂದು( Heavy Rain)  ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ಭಾರಿ ಮಳೆಯಾಗಲಿದೆ, ಸೆ.21 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬೆಂಗಳೂರಿನಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದೇ ರೀತಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...