alex Certify Rain Alert Karnataka : ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert Karnataka : ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಕಡೆ ಭಾರಿ ಮಳೆ ಬೀಳಲಿದ್ದು, ಸಂಜೆಯ ನಂತರ ಮಳೆ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.ಹಾಗೆಯೇ , ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಳ್ಳಾರಿ, ಕೊಡಗು, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಯಲ್ಲಿ ಮತ್ತೆ ಮಳೆ ಮುಂದುವರೆಯಲಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 14 ರಿಂದ 16 ರವರೆಗೆ ಅತಿ ಸಾಧಾರಣ ಮಳೆ ಆಗಲಿದೆ. ಬಳಿಕ ಎರಡು ದಿನಗಳ ನಂತರ ಸಾಧಾರಣ ಮಳೆ ಆಗಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಒಂದು ವಾರ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...