alex Certify BIG NEWS: ಇನ್ನೂ ಐದು ದಿನಗಳ ಕಾಲ ರಾಜ್ಯದ ವಿವಿಧೆಡೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್ನೂ ಐದು ದಿನಗಳ ಕಾಲ ರಾಜ್ಯದ ವಿವಿಧೆಡೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Karnataka Rains: ಭಾನುವಾರವೂ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ - Karnataka rains heavy rain is likely in the state on sunday too yellow alert in some districts ayb ...

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ ಎಂದು ತಿಳಿಸಲಾಗಿದ್ದು, ಒಳನಾಡು ಪ್ರದೇಶದಲ್ಲೂ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹೇಳಲಾಗಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಜನರಿಗೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ತಂಪೆರೆದಿದೆ. ಕೆರೆಕಟ್ಟೆಗಳು ಹಳ್ಳ ಕೊಳ್ಳಗಳಲ್ಲಿ ನಿಧಾನವಾಗಿ ನೀರು ಸಂಗ್ರಹವಾಗುತ್ತಿದ್ದು, ಬಿಸಿಲಿನ ಹೊಡೆತಕ್ಕೆ ಬಿರುಕು ಬಿಟ್ಟಿದ್ದ ಭೂಮಿ ತಂಪಾಗತೊಡಗಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ ಎಂಬ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ರೈತಾಪಿ ವರ್ಗ ಸಂತಸದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...