ಬೆಂಗಳೂರು : ರಾಜ್ಯದ ಕೆಲವು ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ವಿಜಯಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಪ್ರಕಾರ ನವೆಂಬರ್ 14 ರ ವೇಳೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುವ ಸಾಧ್ಯತೆಯಿದ್ದು, ಹಿನ್ನೆಲೆಯಲ್ಲಿ ನವೆಂಬರ್ 14 ಮತ್ತು 15ರಂದು ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.