ಬೆಂಗಳೂರು : ಬೆಂಗಳೂರು, ಕರಾವಳಿ ಭಾಗದ ಜಿಲ್ಲೆಗಳ, ಮಲೆನಾಡು ಭಾಗದ ಕೆಲವು ಕಡೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರ ಬೆಳಿಗ್ಗೆವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸಹಿತ ಒಂದೆರಡು ಭಾಗದಲ್ಲಿ ಮಾತ್ರ ಮಳೆಯಾಗಬಹುದು.
ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿಯಲ್ಲಿ ಡಿ.18ರಿಂದ ಡಿ.19ರವರೆಗೆ ಮಳೆ ಸುರಿಯಲಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನವೂ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಮಂಗಳವಾರ ಬೆಳಿಗ್ಗೆ ವರೆಗ ಕೆಲವು ಕಡೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿಲ್ಲ.