ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಿಚಾಂಗ್ ಚಂಡಮಾರುತದ ಪರಿಣಾಮದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ಚಂಡಮಾರುತದ ಪರಿಣಾಮ ರಾಜ್ಯದ ಮೇಲೆ ಕೂಡ ಪರಿಣಾಮ ಬೀರಲಿದೆ.
ತುಮಕೂರು, ಬೆಂಗಳೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ದಕ್ಷಿಣ ಕನ್ನಡ, ಚಿತ್ರದುರ್ಗ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇದ್ದರೆ, ಮಧ್ಯಾಹ್ನದ ನಂತರ ಬಿಸಿಲು ಬರಲಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳದಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಡಿಸೆಂಬರ್ 9ರಂದು ಧಾರವಾಢ, ಯಾದಗಿರಿ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ದಾವಣಗೆರೆ, ತುಮಕೂರು, ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.