alex Certify Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಡಿ.7 ರವರೆಗೂ ಭಾರಿ’ ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಡಿ.7 ರವರೆಗೂ ಭಾರಿ’ ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಡಿಸೆಂಬರ್ 7 ರವರೆಗೂ ಭರ್ಜರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಿಹಾಂಗ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಡಿ.7 ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ. ಮಂಡ್ಯ, ಕೋಲಾರ. ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ , ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾನುವಾರ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಡಿಸೆಂಬರ್ 4ರಂದು ರಾಯಚೂರು, ಯಾದಗಿರಿ, ವಿಜಯಪುರ, ವಿಜಯನಗರ, ಗದಗ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...