ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ನಿನ್ನೆ ಸುರಿದ ಮಹಾಮಳೆಗೆ ಉಡುಪಿಯಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿದ್ದಾನೆ. ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಆಯತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿದ್ದಾನೆ.
ದಿವಾಕರ್ ಶೆಟ್ಟಿ ಎಂಬುವವರು ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜೆ ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ತೆಕ್ಕಟೆಯ ಮಲ್ಯಾಡಿ ಸಮೀಪ ಆಯತಪ್ಪಿ ಬೈಕ್ ಜೊತೆಗೆ ಜಾರಿ ಕೆರೆಗೆ ಉರುಳಿ ಬಿದ್ದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.