alex Certify BREAKING : ಮಹಾಮಳೆಗೆ ಉಡುಪಿಯಲ್ಲಿ ಮತ್ತೊಂದು ಬಲಿ : ಕಾಲುಜಾರಿ ನದಿಗೆ ಬಿದ್ದು ವೃದ್ದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಹಾಮಳೆಗೆ ಉಡುಪಿಯಲ್ಲಿ ಮತ್ತೊಂದು ಬಲಿ : ಕಾಲುಜಾರಿ ನದಿಗೆ ಬಿದ್ದು ವೃದ್ದ ಸಾವು

ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಹಾಮಳೆಗೆ ಉಡುಪಿಯಲ್ಲಿ ಮತ್ತೊಂದು ಬಲಿಯಾಗಿದ್ದು, ಕಾಲುಜಾರಿ ಬಿದ್ದು ವೃದ್ದರೊಬ್ಬರು ಸಾವನ್ನಪ್ಪಿದ್ದಾರೆ.

ಉಡುಪಿಯ ಕುಬ್ಜಾ ನದಿಗೆ ಬಿದ್ದು 75 ವರ್ಷದ ಶೇಷಾದ್ರೀ ಐತಾಳ್ ಎಂಬುವವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 100 ಮೀಟರ್ ದೂರದಲ್ಲಿ ವೃದ್ದನ ಶವ ಪತ್ತೆಯಾಗಿದೆ.

ಬೈಕ್ ಸವಾರ ಸಾವು

ನಿನ್ನೆ ಸುರಿದ ಮಹಾಮಳೆಗೆ ಉಡುಪಿಯಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿದ್ದಾನೆ. ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಆಯತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿದ್ದಾನೆ.ದಿವಾಕರ್ ಶೆಟ್ಟಿ ಎಂಬುವವರು ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜೆ ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ತೆಕ್ಕಟೆಯ ಮಲ್ಯಾಡಿ ಸಮೀಪ ಆಯತಪ್ಪಿ ಬೈಕ್ ಜೊತೆಗೆ ಜಾರಿ ಕೆರೆಗೆ ಉರುಳಿ ಬಿದ್ದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...