alex Certify ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಜನವರಿ 10 ರಂದು ಬುಧವಾರ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ.

ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಗುಡುಗು ಸಹಿತ 7 ಸೆಂ.ಮೀ.ಗಿಂತ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಮಂಗಳವಾರ ಸುಳ್ಯ, ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಸೇರಿ ಹಲವೆಡೆ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...