ನವದೆಹಲಿ: ರಾಜ್ಯದಲ್ಲಿ ಈಗಾಗಾಲೇ ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಈ ಮಧ್ಯೆ ಇಂದು ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಅತಿಹೆಚ್ಚು ಮಳೆಯಾಗಲಿದ್ದು, ಮೂರು ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.
ಇನ್ನು ಕೇರಳ, ಛತ್ತೀಸ್ ಘಡ, ಒಡಿಶಾ, ಗುಜರಾತ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿಯೂ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಜರಾತ್ ಮಧುಬಾನ್ ನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಮನೆ, ಹೆದ್ದಾರಿಗಳು ಸಂಪೂರ್ಣ ಜಲಾವೃತಗೊಂಡಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಇನ್ನೊಂದೆಡೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟದ ಜೊತೆಗೆ ಗುಡ್ಡಕುಸಿತ, ಭೂಕುಸಿತ ಸಂಭವಿಸುತ್ತಿದ್ದು, ರಸ್ತೆ ಸಂಚಾರ ಕಡಿತಗೊಂಡಿದೆ.