ದೆಹಲಿ: ಭಾರತದ ಪೂರ್ವ, ಪಶ್ಚಿಮ ಹಾಗೂ ಮಧ್ಯ ಭಾಗಗಳಲ್ಲಿ ಆಗಸ್ಟ್ 1ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜಸ್ಥಾನ, ಛತ್ತೀಸ್ ಗಢ ಹಾಗೂ ಜಾರ್ಖಂಡ್ ನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಜಮ್ಮು-ಕಾಶ್ಮೀರದಲ್ಲೂ ಭಾರಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಕಿಶ್ತ್ವಾರ್ ಜಿಲ್ಲೆಯ ಹೊಂಜಾರ್ ಗ್ರಾಮದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಮೇಘ ಸ್ಫೋಟಕ್ಕೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
BIG NEWS: ಕಾಂಗ್ರೆಸ್ ಗೆ ಸೇರ್ಪಡೆಯಾದ ಮಧು ಬಂಗಾರಪ್ಪ
ನೌಗಾರ್, ಸಿಕಾರ್ ಮತ್ತು ಅಜ್ಮೇರ್ ಜಿಲ್ಲೆಗಳಲ್ಲಿ 115 ರಿಂದ 204 ಮಿ.ಮೀ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ನೈಋತ್ಯ ಮುಂಗಾರು ಹೆಚ್ಚು ತೀವ್ರತೆಯನ್ನು ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೈಪುರ, ಝುಂಜುನು, ಟೊಂಕ್, ಕೋಟ, ಬಿಲ್ವಾರ, ಬಾರನ್, ಚುರು ಮತ್ತು ಜಲವಾರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಮಧ್ಯಪ್ರದೇಶದ 15 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಏತನ್ಮಧ್ಯೆ, ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಲಾಹೌಲ್-ಸ್ಪಿಟಿಯಲ್ಲಿ 175 ಮಂದಿ ಪ್ರವಾಸಿಗರು ಸಿಲುಕಿಕೊಂಡಿದ್ದಾರೆ.