ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ನಿನ್ನೆ ಬೆಳ್ತಂಗಡಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತೆ ಕ್ರಮವಾಗಿ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಸೇರಿ ವಿವಿಧ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.