
ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ಸೋಮವಾರವೂ ರಜೆ ಘೋಷಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ಎರಡು ದಿನ ರಜೆ ನೀಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಹಮ್ಮದ್ ರೋಶನ್ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶ ಹೊರಡಿಸಿದ್ದಾರೆ.