ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಾಲೆಗಳಿಗೆ ರಜೆ ನೀಡಲಾಗಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿನ್ನೆಯಿಂದಲೂ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಮಕ್ಕಳ ಸುರಕ್ಷತೆ ದೃಷ್ಟಿಯಿಂದಾಗಿ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಅಂಗನವಾಡಿ ಕೇಂದ್ರಗಳಿಗೆ ಮೇ 19 ರ ಗುರುವಾರ ರಜೆ ನೀಡಲಾಗಿದೆ.
ದಕ್ಷಿಣಕನ್ನಡದಲ್ಲಿ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಈಗಾಗಲೇ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಒಂದು ದಿನ ರಜೆ ಘೋಷಿಸಿ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಆದೇಶ ಹೊರಡಿಸಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಡಿಡಿಪಿಐ ರಾಮಚಂದ್ರ ಮನವಿ ಮೇರೆಗೆ ರಜೆ ಘೋಷಣೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಶಾಲೆಗಳಿಗೆ ರಜೆ ನೀಡಲಾಗಿದೆ.