
ಉಡುಪಿ: ನಾಳೆ ಉಡುಪಿ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಆಗಸ್ಟ್ 1ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.