alex Certify ಭಾರೀ ಮಳೆ ಹಿನ್ನೆಲೆ, ಹಲವೆಡೆ ಶಾಲೆಗಳಿಗೆ 2 ದಿನ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರೀ ಮಳೆ ಹಿನ್ನೆಲೆ, ಹಲವೆಡೆ ಶಾಲೆಗಳಿಗೆ 2 ದಿನ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹೆಬ್ರಿ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಅಪರ ಜಿಲ್ಲಾಧಿಕಾರಿ ಬಿ.ಎಸ್. ವೀಣಾ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಶೃಂಗೇರಿ, ಕಳಸ ತಾಲೂಕಿನ ಶಾಲೆಗೆ ಇಂದು, ನಾಳೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ಶಾಲೆಗಳಿಗೆ ರಜೆ ನೀಡಲಾಗಿದೆ.

ಜುಲೈ 5, 6ರಂದು ರಜೆ ಘೋಷಿಸಿ ಚಿಕ್ಕಮಗಳೂರು ಡಿಸಿ ಆದೇಶ ಹೊರಡಿಸಿದ್ದಾರೆ. ಹಳ್ಳಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮುಂಜಾಗ್ರತೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...