ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಬೆಂಗಳೂರು ನಗರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಸೇರಿದಂತೆ ಹಲವು ಕಡೆ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ಶಿವಮೊಗ್ಗ, ವಿಜಯನಗರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಸಂಜೆ ವೇಳೆಗೆ ವಾಹನ ಸವಾರರು, ಸಾರ್ವಜನಿಕರು ಬೇಗ ಮನೆ ಸೇರುವುದು ಒಳಿತು. ಕರ್ನಾಟಕದಲ್ಲಿ ಕಳೆದ 3-4 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮೂಡಿದೆ.