alex Certify Rain Alert ; ರಾಜ್ಯದಲ್ಲಿ ಮುಂದಿನ ಒಂದು ವಾರ ಗುಡುಗು ಸಹಿತ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert ; ರಾಜ್ಯದಲ್ಲಿ ಮುಂದಿನ ಒಂದು ವಾರ ಗುಡುಗು ಸಹಿತ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 20ರಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಉತ್ತರ ಕನ್ನಡ, ಹಾವೇರಿ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ನಾಳೆ ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಉತ್ತರ ಕನ್ನಡ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿಸಿಲಿನ ಹೊಡೆತಕ್ಕೆ ಕಂಗೆಟ್ಟ ಜನತೆಗೆ ಮಳೆರಾಯ ತಂಪೆರೆದಿದ್ದಾನೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...