alex Certify HEAVY RAIN ALERT: ರಾಜ್ಯದ 25 ಜಿಲ್ಲೆಗಳಲ್ಲಿ ಭಾರಿ ಮಳೆ; ಉತ್ತರಕ್ಕೆ ಯೆಲ್ಲೋ, ದಕ್ಷಿಣಕ್ಕೆ ಆರೆಂಜ್ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

HEAVY RAIN ALERT: ರಾಜ್ಯದ 25 ಜಿಲ್ಲೆಗಳಲ್ಲಿ ಭಾರಿ ಮಳೆ; ಉತ್ತರಕ್ಕೆ ಯೆಲ್ಲೋ, ದಕ್ಷಿಣಕ್ಕೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಇಂದು ಸಹ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

25 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಬೀದರ್, ಧಾರವಾಡ, ರಾಯಚೂರು, ಕಲ್ಬುರ್ಗಿ, ವಿಜಯಪುರ, ಕೊಪ್ಪಳ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ.  9 ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಇನ್ನೂ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...