alex Certify ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ 4 ದಿನ ಭಾರಿ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ 4 ದಿನ ಭಾರಿ ಮಳೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ರಾಜ್ಯದ 18 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 15 ರವರೆಗೂ ಧಾರಾಕಾರ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಬೀದರ್ ಮೊದಲಾದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಚಾಮರಾಜನಗರ, ರಾಯಚೂರು, ಯಾದಗಿರಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...