ಬೆಂಗಳೂರು: ರಾಜ್ಯದ ವಿವಿವಿಧೆಡೆ ಮೂರು ದಿನ ಬಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಭಾನುವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳ ಹಲವು ಕಡೆ ಗುಡುಗು ಸಹಿತ ಭಾರಿ ಮಳೆ ಆಗುವ ಸಂಭವ ಇದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ಸೋಮವಾರ ಕೂಡ ಕಲಬುರಗಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಮಂಗಳರಾಗುವ ಉತ್ತರ ಒಳನಾಡಿನ ಹಲವು ಕಡೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.