ಬೆಂಗಳೂರು: ಅಕ್ಟೋಬರ್ 30 ರಿಂದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಕ್ಟೋಬರ್ 30 ಮತ್ತು 31 ರಂದು ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಮತ್ತು ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ರಿಂದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನ ಆರ್ಭಟ ಹೆಚ್ಚಾಗಲಿದೆ.