alex Certify 14 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

14 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಅಕ್ಟೋಬರ್ 30 ರಿಂದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಕ್ಟೋಬರ್ 30 ಮತ್ತು 31 ರಂದು ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಮತ್ತು ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ರಿಂದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನ ಆರ್ಭಟ ಹೆಚ್ಚಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...