
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಂಭವ ಇರುವುದರಿಂದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಮತ್ತು ಒಳನಾಡಿನ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 12 ರಿಂದ 20 ಸೆಂ.ಮೀ.ವರೆಗೆ ಮಳೆ ಆಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.
ಚಿಕ್ಕಮಗಳೂರು, ರಾಯಚೂರು, ಬಾಗಲಕೋಟೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.