
ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ 6ರಿಂದ 15 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 1 ಮತ್ತು 2 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು ಭಾಗದಲ್ಲಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಗಾಳಿ ಬೀಸುವ ಸಂಭವವಿದೆ. ಕರಾವಳಿಯಲ್ಲಿ 35 ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.