alex Certify BIG NEWS: ಭಾರಿ ಮಳೆಗೆ ಕುಸಿದ ಮನೆ ಗೋಡೆ; ಯುವಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆಗೆ ಕುಸಿದ ಮನೆ ಗೋಡೆ; ಯುವಕ ದುರ್ಮರಣ

ಚಾಮರಾಜನಗರ: ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಮಳೆಗೆ ಮನೆ ಗೋಡೆ ಕುಸಿದುಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಇಲ್ಲಿನ ದಡದಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, 33 ವರ್ಷದ ಮೂರ್ತಿ ಮೃತ ದುರ್ದೈವಿ. ನಿರಂತರ ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿದ್ದ ಮನೆಯ ಗೋಡೆ ಕುಸಿದಿದೆ. ಮಣ್ಣಿನಡಿ ಸಿಲುಕಿ ಯುವಕ ಸಾವನ್ನಪ್ಪಿದ್ದಾರೆ.

ಈ ವೇಳೆ ಮನೆಯಲ್ಲಿದ್ದ ಯುವಕನ ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...