ನವದೆಹಲಿ: ಮುಂದಿನ 24 ಗಂಟೆಗಳಲ್ಲಿ ದೇಶದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪಾಕಿಸ್ತಾನದ ಪ್ರದೇಶದಲ್ಲಿ ಚಂಡಮಾರುತ ಏಳುವ ಸಾಧ್ಯತೆ ಇದ್ದು, ರಾಜಸ್ಥಾನದ ಮೇಲೆ ಪರಿಣಾಮ ಬೀರಲಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಕೇರಳ ಅರುಣಾಚಲ ಪ್ರದೇಶ ಪಂಜಾಬ್ ಭಾಗದಲ್ಲಿ ಇಂದು ಮಳೆಯಾಗಲಿದ್ದು, ಫೆಬ್ರವರಿ 28 ರಂದು ಕೇರಳ, ಮಾಹೆ, ಅರುಣಾಚಲಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಅದೇ ರೀತಿ ಮಾರ್ಚ್ 1 ರಂದು ಕಾಶ್ಮೀರ, ಗಿಲ್ಗಿಟ್ ಪ್ರದೇಶ, ಮುಜಾಫರಾಬಾದ್, ಅರುಣಾಚಲಪ್ರದೇಶದಲ್ಲಿ ಮಳೆಯಾಗಲಿದೆ. ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ಹಲವೆಡೆ ಮೋಡ ಕವಿದ, ಮಂಜು ಮುಸುಕಿದ ವಾತಾವರಣ ಇರಲಿದೆ ಎನ್ನಲಾಗಿದೆ.