alex Certify ಭಾರಿ ಮಳೆಗೆ ಭೂಕುಸಿತ: 3 ಸಾವು, 10 ಜನ ನಾಪತ್ತೆ: ವರ್ಷಧಾರೆಗೆ ಕೇರಳ ಅಸ್ತವ್ಯಸ್ತ -2018 ರ ಪ್ರವಾಹ ನೆನಪಿಸಿದ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆಗೆ ಭೂಕುಸಿತ: 3 ಸಾವು, 10 ಜನ ನಾಪತ್ತೆ: ವರ್ಷಧಾರೆಗೆ ಕೇರಳ ಅಸ್ತವ್ಯಸ್ತ -2018 ರ ಪ್ರವಾಹ ನೆನಪಿಸಿದ ಅವಘಡ

ತಿರುವನಂತಪುರಂ: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಕಾರಣದಿಂದಾಗಿ ಕೇರಳದಲ್ಲಿ ಶುಕ್ರವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ.

ವಿಶೇಷವಾಗಿ ಪಟ್ಟನಂತಿಟ್ಟಾದಲ್ಲಿ ಭಾರಿ ಮಳೆಯಾಗುತ್ತಿದ್ದು, 2018 ರ ಪ್ರವಾಹದ ಸಮಯದ ನೆನಪುಗಳನ್ನು ತರುವಂತಿದೆ. ಕೊಟ್ಟಾಯಂನ ಕೂಟ್ಟಿಕಲ್ ಪಂಚಾಯತ್‌ನಲ್ಲಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 13 ಜನರು ಕಾಣೆಯಾಗಿದ್ದಾರೆ. ಇಲ್ಲಿಯವರೆಗೆ ಮೂರು ಶವಗಳನ್ನು ಪತ್ತೆ ಮಾಡಲಾಗಿದೆ. ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಭಾರತೀಯ ನೌಕಾಪಡೆಯ ಸಹಾಯ ಪಡೆಯಲಾಗಿದೆ.

ತೋಡುಪುಳದಲ್ಲಿ ಕಾರು ಕೊಚ್ಚಿಹೋಗಿ ಓರ್ವ ಪುರುಷ ಮತ್ತು ಮಹಿಳೆ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹ ಜಾಸ್ತಿಯಾಗಿದೆ. ತಿರುವನಂತಪುರಂ ಮತ್ತು ಪಟ್ಟನಂತಿಟ್ಟದ ಜಿಲ್ಲಾಡಳಿತಗಳು ವಿವಿಧ ಅಣೆಕಟ್ಟುಗಳಿಂದ ನೀರು ಹೊರಬಿಡುವ ಎಚ್ಚರಿಕೆ ನೀಡಿವೆ.

ತಿರುವನಂತಪುರಂನಲ್ಲಿ ಮನೆಯಿಂದ ಅನವಶ್ಯಕವಾಗಿ ಹೊರಬರದಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಹಳ್ಳ, ತೊರೆ, ನದಿ ಪಾತ್ರಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ನೆಯ್ಯಾರ್ ಅಣೆಕಟ್ಟಿನ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ.

ಪತ್ತನಂತಿಟ್ಟದಲ್ಲಿ ಅನಾಥೋಡ್ ಅಣೆಕಟ್ಟು ಮತ್ತು ಅದರ ಜಲಾನಯನ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಹಲವಾರು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಕೊಟ್ಟಾಯಂ, ಪತ್ತನಂತಿಟ್ಟ, ಇಡುಕ್ಕಿ, ಎರ್ನಾಕುಲಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 40 ಕಿಮೀ ವರೆಗೂ ಇರಲಿದೆ. ಗುಡುಗುಸಹಿತ ಬಿರುಗಾಳಿ ಮಳೆಯ ಬಗ್ಗೆ ಐಎಂಡಿ ಎಚ್ಚರಿಸಿದೆ.

ನಿರಂತರ ಮಳೆಯಿಂದಾಗಿ ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...