alex Certify ಭಾರಿ ಮಳೆ ಹಿನ್ನೆಲೆ ನಾಳೆ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ: ದಕ್ಷಿಣ ಕನ್ನಡ ಡಿಸಿ ಮುಲ್ಲೈ ಮುಗಿಲನ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆ ಹಿನ್ನೆಲೆ ನಾಳೆ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ: ದಕ್ಷಿಣ ಕನ್ನಡ ಡಿಸಿ ಮುಲ್ಲೈ ಮುಗಿಲನ್ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.

ನಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಸಮೀಪ ಹೋಗದಂತೆ ಎಚ್ಚರಿಕೆವಹಿಸುವುದು.

ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.

ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ, ತುರ್ತು ಸೇವೆಗೆ ಟೋಲ್ ಫ್ರೀ ನಂ.24°7 ಕಂಟ್ರೋಲ್ ರೂಂ – 1077 / 0824-2442590 ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...