ಬೆಂಗಳೂರು : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.
ಕಲಾಸಿಪಾಳ್ಯ, ಕೆ.ಆರ್.ಮಾರ್ಕೆಟ್, ಜಯನಗರ, ವಿಲ್ಸನ್ಗಾರ್ಡನ್, ಕಾರ್ಪೊರೇಷನ್ ವೃತ್ತ, ಡಬಲ್ ರೋಡ್, ಮೆಜೆಸ್ಟಿಕ್, ಶಾಂತಿನಗರ, ಎಂ.ಜಿ.ರಸ್ತೆ, ವಿವೇಕನಗರ ಮತ್ತು ಕೋರಮಂಗಲ ಸೇರಿದಂತೆ ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಧ್ಯಾಹ್ನದ ನಂತರ ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದ್ದಾರೆ. ಅದೇ ರೀತಿ ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಬೆಂಗಳೂರು, ಕೋಲಾರ ಸೇರಿದಂತೆ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.