ಬೆಂಗಳೂರು : ರಾಜ್ಯದ ಹಲವೆಡೆ ಕಳೆದ 2 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಕಲಬುರಗಿ, ಚಾಮರಾಜನಗರ, ಬೆಂಗಳೂರು, ಚಿತ್ರದುರ್ಗ ಸೇರಿ ಹಲವು ಕಡೆ ಮಳೆಯಾಗಿದೆ. ಕಲಬುರಗಿಯಲ್ಲಿ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಲಾವತಿ ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಕೂಡ ಭಾರಿ ಮಳೆಯಾಗಿದ್ದು, ಜನ ಸಂಚಾರ ಅಸ್ತವ್ಯಸ್ತವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೆಡಗಪಲ್ಲಿ ಗ್ರಾಮದ ಮನೆಗಳಿಗೆ ಮಳೆಯ ನೀರು ನುಗ್ಗಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು ನೀರುಪಾಲಾಗಿವೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆ.3 ರಂದು ಇಂದು ಬೀದರ್ , ಕಲಬುರಗಿ, ಹಾಗೂ ಸೆ.4 ರಂದು ನಾಳೆ ಕಲಬುರಗಿ, ಬಾಗಲಕೋಟೆ, ಕೊಪ್ಪಳ ಜಿಲ್ಲೆಯಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.