ಮುಂದಿನ ಕೆಲವು ದಿನ ಕರ್ನಾಟಕ, ಕೇರಳ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಜೂನ್ 29ರವರೆಗೂ ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ, ಒಡಿಶಾ, ಕೇರಳ, ಮೇಘಾಲಯ, , ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಜಾರ್ಖಂಡ್ ಹಿಮಾಚಲಪ್ರದೇಶ, ಉತ್ತರಾಖಂಡ, ದೆಹಲಿ ಹಾಗೂ ಅರುಣಾಚಲಪ್ರದೇಶ, ಕರ್ನಾಟಕ, ಅಸ್ಸಾಂನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಜೂನ್ 26 ರಂದು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ, ಜೂನ್ 28 ಮತ್ತು ಜೂನ್ 29 ರಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರಿ ಮಳೆಯಾಗಲಿದೆ.
ಕರ್ನಾಟಕದಲ್ಲಿ ಭಾರಿ ಮಳೆ
ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೂ.26 ರಿಂದ 29ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಈಗಾಗಲೇ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಜೂನ್ 30ರವರೆಗೆ ಕರಾವಳಿಯಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಜಿಲ್ಲೆ ಬೀದರ್, ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ರಾಯಚೂರು, ವಿಜಯಪುರ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.