ಬೆಂಗಳೂರು: ದೇಶಾದ್ಯಂತ ಸೆಪ್ಟೆಂಬರ್ ನಲ್ಲಿ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ ಈ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ ಎರಡು ದಿನ ಹೆಚ್ಚಿನ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟಂಬರ್ 1, 2, 3ರಂದು ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಕರ್ನಾಟಕ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಸೆಪ್ಟಂಬರ್ ತಿಂಗಳಿಡೀ ಪ್ರತಿ ವಾರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಇದರ ಪರಿಣಾಮ ದೇಶದ ಬಹುತೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ದಕ್ಷಿಣ ಭಾರತದ ಬಹುತೇಕ ರಾಜ್ಯಗಳು, ಉತ್ತರ ಪ್ರದೇಶ, ಬಿಹಾರ, ಈಶಾನ್ಯ ರಾಜ್ಯಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.