ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯಲ್ಲಿ ಜುಲೈನಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ನಿಷೇಧಿಸಿದೆ.
ಭಾರಿ ವಾಹನಗಳ ಸಂಚಾರದಿಂದ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಹೆದ್ದಾರಿಗಳಲ್ಲಿ 12 ಸಾವಿರ ಕೆಜಿ ಮೇಲ್ಪಟ್ಟ ವಾಹನಗಳ ಸಂಚಾರವನ್ನು ಜುಲೈ 5 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಹೆಚ್ಚು ಮಳೆ ಮುನ್ಸೂಚನೆ, ಭೂಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.