alex Certify ಹಲೋ ಅಪ್ಪ : ಬಿಜೆಪಿಯಿಂದ ಮತ್ತೊಂದು ‘ಶ್ಯಾಡೋ ಸಿಎಂ’ ಪೋಸ್ಟರ್ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಲೋ ಅಪ್ಪ : ಬಿಜೆಪಿಯಿಂದ ಮತ್ತೊಂದು ‘ಶ್ಯಾಡೋ ಸಿಎಂ’ ಪೋಸ್ಟರ್ ಬಿಡುಗಡೆ

ಸಿಎಂ ಸಿದ್ದರಾಮಯ್ಯ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ವಿಚಾರ ಟೀಕೆ ಮಾಡಲು ವಿಪಕ್ಷಗಳಿಗೆ ದೊಡ್ಡ ಆಹಾರ ಸಿಕ್ಕಂತಾಗಿದೆ.

ಇದೀಗ ಬಿಜೆಪಿ ತನ್ನ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಪೋಸ್ಟರ್ ಒಂದನ್ನು ರಿಲೀಸ್ ಮಾಡಿದೆ. ಯತೀಂದ್ರ ಸಿದ್ದರಾಮಯ್ಯ ಅವರನ್ನು “ಶ್ಯಾಡೋ ಸಿಎಂ ಎಂದು ಕರೆದ ಬಿಜೆಪಿ ಇದಕ್ಕೆ ಹೆಲೋ ಅಪ್ಪ..! ಎಂದು ಶೀರ್ಷಿಕೆ ನೀಡಿದೆ.

ಫೋಟೊ ಒಳಗೆ ಸಿಎಂ ಸಿದ್ದರಾಮಯ್ಯ ಅವರ ಲೆಟರ್ ಹೆಡ್ ಹಾಕಿ, ಸಿದ್ದರಾಮಯ್ಯ ಅವರ ಫೋಟೊವನ್ನು ಸಣ್ಣದಾಗಿ ಹಾಕಿ ಅವರ ನೆರಳನ್ನು ದೊಡ್ಡದು ಮಾಡಿ ಅದರಲ್ಲಿ ಯತೀಂದ್ರ ಸಿದ್ದರಾಮಯ್ಯ ಮೂಡುವಂತೆ ಮಾಡಲಾಗಿದೆ. ಈ ಮೂಲಕ ಬಿಜೆಪಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿಡಿಯೋ ವೈರಲ್ ವಿಚಾರ ವ್ಯಾಪಕ ಚರ್ಚೆಯಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಕರೆ ಮೂಲಕ ಯತೀಂದ್ರ ಮಾತನಾಡಿದ್ದಾರೆ. ಅಪ್ಪ ಹೇಳಿ ಎಂದು ಮಾತು ಆರಂಭಿಸುವ ಅವರು ತಾನು ನೀಡಿದ ಪಟ್ಟಿಯ ಬಗ್ಗೆ ಮಾತನಾಡಿ ವಿವೇಕಾನಂದರ ಹೆಸರು ಪ್ರಸ್ತಾಪಿಸಿ ಇದಕ್ಕೆ ಯಾರು ಎಂದು ಕೇಳಿದ್ದಾರೆ. ಬೇರೊಂದು ಲಿಸ್ಟ್ ನೀಡಿದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ನಾನು ಕೊಟ್ಟಿರುವುದೇ ಐದು ಅಂತ ಹೇಳಿ ಮಹಾದೇವರಿಗೆ ಫೋನ್ ನೀಡುವಂತೆ ಸಿದ್ದರಾಮಯ್ಯರಿಗೆ ತಿಳಿಸುತ್ತಾರೆ. ನಂತರ ಮಹದೇವ ಜೊತೆ ಮಾತನಾಡಿ, ಯಾಕೆ ಯಾವುದ್ಯಾವುದೋ ಕೊಡ್ತೀಯಾ? ಮತ್ತೆ ಇದೆಲ್ಲ ಯಾರು ಕೊಡ್ತಿರೋದು ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...