alex Certify ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಶಾಲಾ ಮಕ್ಕಳಿಗೆ ಮತ್ತೊಂದು ಮುಖ್ಯವಾದ ಮಾಹಿತಿ ಇಲ್ಲಿದೆ. ಮಕ್ಕಳ ಮೇಲಿನ ಶೋಷಣೆ ತಡೆಗೆ ಕ್ರಮ ಕೈಗೊಳ್ಳಲಾಗಿದ್ದು, ತುರ್ತು ಸೇವೆಗೆ 1098 ಸನ್ನದ್ಧವಾಗಿದೆ. ಶಾಲೆಗಳ ಗೋಡೆಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ಬರೆಸಲು ಕ್ರಮಕೈಗೊಳ್ಳಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗೋಡೆಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಸಲು ಮಕ್ಕಳ ರಕ್ಷಣಾನಿರ್ದೇಶನಾಲಯದ ಮನವಿ ಮೇರೆಗೆ ಶಿಕ್ಷಣ ಇಲಾಖೆಯಿಂದ ಕ್ರಮಕೈಗೊಳ್ಳಲಾಗಿದ್ದು, ಈಗಾಗಲೇ ಕ್ಷೇತ್ರ ಶಿಕ್ಷಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ದೌರ್ಜನ್ಯ, ಶೋಷಣೆಗೆ, ನಿರ್ಲಕ್ಷಕ್ಕೆ ಒಳಗಾದ ಮತ್ತು ಕುಟುಂಬದಿಂದ ಬೇರೆಯಾದ ಮಕ್ಕಳ ಪರಿಸ್ಥಿತಿಯನ್ನು ಉತ್ತಮ ಪಡಿಸಲು ಸಮಗ್ರ ಶಿಕ್ಷಣ ಯೋಜನೆ ಕಾರ್ಯನಿರ್ವಹಿಸುತ್ತಿದ್ದು, ತೊಂದರೆಗೊಳಗಾದ ಮಕ್ಕಳು, ಸಾರ್ವಜನಿಕರು ಸಹಾಯವಾಣಿಗೆ ಮಾಹಿತಿ ನೀಡಿದಲ್ಲಿ ತುರ್ತು ಸ್ಪಂದನೆ ಸಿಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...