alex Certify ಮಾ. 31 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮುಖ್ಯ ಮಾಹಿತಿ; ಸಹಾಯವಾಣಿ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾ. 31 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮುಖ್ಯ ಮಾಹಿತಿ; ಸಹಾಯವಾಣಿ ಆರಂಭ

ಬೆಂಗಳೂರು: ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ.

ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸಹಾಯವಾಣಿ ಆರಂಭಿಸಲಾಗಿದೆ. ಮಾರ್ಚ್ 20 ರಿಂದ 28 ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 7:30ರ ವರೆಗೆ ಹಾಗೂ ಮಾರ್ಚ್ 26ರಂದು ಬೆಳಗ್ಗೆ 11 ಗಂಟೆಯಿಂದ 6 ಗಂಟೆಯವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆ ಕುರಿತಾದ ಯಾವುದೇ ಗೊಂದಲ ಮಾಹಿತಿಗೆ 080 -23310075/76 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...