alex Certify BREAKING: ಬಿಜೆಪಿ ದೂರು ಹಿನ್ನಲೆ: ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಜೆಪಿ ದೂರು ಹಿನ್ನಲೆ: ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

ಬೆಂಗಳೂರು:  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಹೇಮಂತ್ ನಿಂಬಾಳ್ಕರ್ ಅವರ ಸ್ಥಾನಕ್ಕೆ ವಿಕಾಸ್ ಕಿಶೋರ್ ಸೂರಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿರುವ ವಿಕಾಸ್ ಕಿಶೋರ್ ಅವರನ್ನು ವಾರ್ತಾ ಇಲಾಖೆ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಬಿಜೆಪಿಯಿಂದ ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೆ ಒತ್ತಾಯಿಸಿ ದೂರು ನೀಡಲಾಗಿತ್ತು. ಅವರ ಪತ್ನಿ ಅಂಜಲಿ ನಿಂಬಾಳ್ಕರ್ ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಿನ್ನೆಲೆಯಲ್ಲಿ ವರ್ಗಾವಣೆಗೆ ಒತ್ತಾಯಿಸಿ ಬಿಜೆಪಿ ದೂರು ನೀಡಿತ್ತು.

ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಪತ್ನಿಯ ಪರವಾಗಿ ಪ್ರಚಾರ ನಡೆಸುವ ಸಾಧ್ಯತೆ ಇದೆ. ತಮ್ಮ ಅಧಿಕಾರ ಬಳಸಿ ಪತ್ನಿ ಪರವಾಗಿ ಕಾರ್ಯನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ವತಿಯಿಂದ ಕೇಂದ್ರ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾ ಅಧಿಕಾರಿ ಕಚೇರಿಗೆ ದೂರು ನೀಡಲಾಗಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...