ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧದ ಭ್ರಷ್ಟಾಚಾರ ಸಂಬಂಧಿತ ಪ್ರಕರಣಗಳ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ಈ ಪ್ರಕರಣ ಮಹತ್ವದ ತಿರುವು ಪಡೆದಿದೆ. ಜೆಎಂಎಂ ಮುಖ್ಯಸ್ಥ ಮತ್ತು ಕಾಂಗ್ರೆಸ್ ಸಂಸದ ಧೀರಜ್ ಸಾಹು ನಡುವಿನ ಸಂಬಂಧವನ್ನು ತನಿಖಾ ಸಂಸ್ಥೆ ಕಂಡುಕೊಂಡ ನಂತರ ಆಶ್ಚರ್ಯಕರ ತಿರುವು ಪಡೆದುಕೊಂಡಿದೆ.
ಕಳೆದ ವರ್ಷ ಡಿಸೆಂಬರ್ ನಲ್ಲಿ ಸಾಹು ಅವರ ಆಸ್ತಿಗಳ ಮೇಲೆ ಆದಾಯ ತೆರಿಗೆ ದಾಳಿಯ ಸಮಯದಲ್ಲಿ ಸುಮಾರು 351 ಕೋಟಿ ರೂ.ಗಳನ್ನು ವಶಪಡಿಸಿಕೊಂಡ ನಂತರ ಬಹಳ ಸುದ್ದಿಯಾಗಿದ್ದರು. ತನಿಖಾ ಅಧಿಕಾರಿಗಳು ಹಣವನ್ನು ಎಣಿಸಲು ದಿನಗಳು ಬೇಕಾಯಿತು. ವಶಪಡಿಸಿಕೊಳ್ಳಲಾದ ಮೊತ್ತವು 351 ಕೋಟಿ ರೂ.ಗಳಾಗಿದೆ ಎಂದು ಅಂದಾಜಿಸಲಾಗಿತ್ತು.
ಇದೀಗ ಹೊಸ ಬೆಳವಣಿಗೆಯಲ್ಲಿ, ಹೇಮಂತ್ ಸೊರೆನ್ ಅವರ ಮನೆಯಿಂದ ವಶಪಡಿಸಿಕೊಳ್ಳಲಾದ ಬಿಎಂಡಬ್ಲ್ಯು ಕಾರು ಸಾಹು ಅವರ ಮನೇಸರ್ ಮೂಲದ ಸಂಸ್ಥೆಯ ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ. ಕಳೆದ ವರ್ಷ ಡಿಸೆಂಬರ್ನಲ್ಲಿ ಕಾಂಗ್ರೆಸ್ ಮುಖಂಡ ಧೀರಜ್ ಸಾಹು ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ 351 ಕೋಟಿ ನಗದು ಮತ್ತು ಲೆಕ್ಕವಿಲ್ಲದ ಸಂಪತ್ತನ್ನು ಪತ್ತೆ ಹಚ್ಚಿತ್ತು. 10 ದಿನಗಳ ಕಾಲ ನಡೆದ ಈ ದಾಳಿಯಲ್ಲಿ 40 ನೋಟು ಎಣಿಕೆ ಯಂತ್ರಗಳನ್ನು ಬಳಸಲಾಗಿತ್ತು.
ಧೀರಜ್ ಸಾಹು ಅವರ ವ್ಯವಹಾರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ: ಕಾಂಗ್ರೆಸ್
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರ ವ್ಯವಹಾರಗಳೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ. ಅವರ ಆಸ್ತಿಗಳಿಂದ ಆದಾಯ ತೆರಿಗೆ ಅಧಿಕಾರಿಗಳು ಎಷ್ಟು ದೊಡ್ಡ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅವರು ಮಾತ್ರ ವಿವರಿಸಬಲ್ಲರು ಮತ್ತು ವಿವರಿಸಬೇಕು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.