
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆ ಮುಗಿದಿರುವ ಬೆನ್ನಲ್ಲೇ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಜಾರ್ಖಂಡ್ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಹೇಮಂತ್ ಸೊರೇನ್ ಆಯ್ಕೆಯಾಗಿದ್ದಾರೆ.
ರಾಂಚಿಯಲ್ಲಿ ನಡೆದ ಜಾರ್ಖಂಡ್ ಮುಕ್ತಿ ಮೋರ್ಚಾ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಮಂತ್ ಸೊರೇನ್ ಅವರನ್ನು ಜಾರ್ಖಂಡ್ ಸಿಎಂ ಆಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಇದೇ ವೇಳೆ ಪದಗ್ರಹಣ ಕಾರ್ಯಕ್ರಮಕ್ಕೂ ಈಗಾಗಲೇ ದಿನಾಂಕ ನಿಗದಿ ಮಾಡಲಾಗಿದ್ದು, ನವೆಂಬರ್ 28ರಂದು ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೇನ್ ಮತ್ತೊಮ್ಮೆ ಅಧಿಕಾರ ಸ್ವಿಕರಿಸಲಿದ್ದಾರೆ.