ಜಾರ್ಖಂಡ್ : ಜಾರ್ಖಂಡ್ ಮುಖ್ಯಮಂತ್ರಿಯಾಗಿ ಮತ್ತೆ ಹೇಮಂತ್ ಸೊರೆನ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 152 ದಿನಗಳ ಬಳಿಕ ಚಂಪೈ ಸೊರೆನ್ ಬುಧವಾರ ರಾಜೀನಾಮೆ ನೀಡಿದ್ದಾರೆ. ಅಕ್ರಮ ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಬಂಧನದ ನಂತರ ಅಧಿಕಾರದಿಂದ ಕೆಳಗಿಳಿದ ಸುಮಾರು ಐದು ತಿಂಗಳ ನಂತರ ಹೇಮಂತ್ ಸೊರೆನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಏರಿದ್ದಾರೆ.