alex Certify ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿದೆ ಟಿಪ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿದೆ ಟಿಪ್ಸ್

ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್‌ ಹೆಚ್ಚಳದಿಂದ ಆಗುವ ಅಪಾಯಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ರಕ್ತದಲ್ಲಿ ಎಲ್‌ಡಿಎಲ್ ಕೊಲೆಸ್ಟ್ರಾಲ್ ಇರುವುದು ಮುಖ್ಯ. ಆದರೆ ಅದರ ಪ್ರಮಾಣವು 100 mg/dL ಗಿಂತ ಹೆಚ್ಚಿದ್ದರೆ, ನಂತರ ರಕ್ತನಾಳಗಳಲ್ಲಿ ಅಡಚಣೆಯ ಅಪಾಯವು ಹೆಚ್ಚಾಗುತ್ತದೆ. ಇದರಿಂದಾಗಿ ಹೃದಯಾಘಾತ ಮತ್ತು ಪಾರ್ಶ್ವವಾಯುವಿನಂತಹ ಪರಿಸ್ಥಿತಿ ಉದ್ಭವಿಸಬಹುದು.

ದೇಹದಲ್ಲಿ LDL ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ ಎಂಬುದನನು ತಿಳಿದುಕೊಳ್ಳುವುದು ಕೂಡ ಬಹಳ ಸುಲಭ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್‌ ಹೆಚ್ಚಾದಾಗ ಹಲವು ಚಿಹ್ನೆಗಳು ಕಾಣಿಸಿಕೊಳ್ಳುತ್ತವೆ. ಇವುಗಳಲ್ಲಿ ಮುಖ್ಯವಾದವುಗಳೆಂದರೆ ವಾಕರಿಕೆ, ಪದಗಳನ್ನು ಸ್ಪಷ್ಟವಾಗಿ ಉಚ್ಚರಿಸಲು ತೊಂದರೆ, ಸುಸ್ತು, ಕೈಕಾಲು ಮರಗಟ್ಟುವಿಕೆ, ಎದೆನೋವು, ಕಣ್ಣಿನ ರೆಪ್ಪೆಗಳ ಮೇಲೆ ಹಳದಿ ಕೊಬ್ಬು ಸಂಗ್ರಹವಾಗುವುದು.

ದೇಹದಲ್ಲಿ ಎಲ್ಡಿಎಲ್ ಕೊಲೆಸ್ಟ್ರಾಲ್ ಹೆಚ್ಚಾಗಲು ಹಲವು ಕಾರಣಗಳಿರಬಹುದು, ಆದರೆ ಇದರಲ್ಲಿ ಆಹಾರವು ಪ್ರಮುಖ ಪಾತ್ರ ವಹಿಸುತ್ತದೆ. ಕೆಟ್ಟ ಆಹಾರ ಪದ್ಧತಿಯು ಕೊಲೆಸ್ಟ್ರಾಲ್ ಅನ್ನು ಪ್ಲೇಕ್ ಆಗಿ ಪರಿವರ್ತಿಸುತ್ತದೆ. ಅದೇ ಸಮಯದಲ್ಲಿ ಆರೋಗ್ಯಕರ ಆಹಾರವನ್ನು ಸೇವಿಸುವ ಮೂಲಕ ಅದನ್ನು ತೊಡೆದುಹಾಕಬಹುದು.

ಕೆಟ್ಟ ಕೊಲೆಸ್ಟ್ರಾಲ್‌ಗೆ ಮದ್ದು ಸೇಬುಹಣ್ಣು!

ಪ್ರತಿದಿನ ಸೇಬು ತಿನ್ನುವುದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಏಕೆಂದರೆ ಸೇಬು ಪೌಷ್ಟಿಕಾಂಶಭರಿತ ಹಣ್ಣು. ಇದರಲ್ಲಿ ತಾಮ್ರ, ವಿಟಮಿನ್ ಕೆ ಮತ್ತು ವಿಟಮಿನ್ ಇ ಜೊತೆಗೆ ನಿಮ್ಮ ದೈನಂದಿನ ವಿಟಮಿನ್ ಸಿ ಸೇವನೆಯ 10 ಪ್ರತಿಶತದಷ್ಟಿರುತ್ತದೆ. ವಿಜ್ಞಾನಿಗಳ ಅಧ್ಯಯನದ ಪ್ರಕಾರ ದಿನಕ್ಕೆ ಎರಡು ಸೇಬು ಹಣ್ಣುಗಳನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು.

ಅಷ್ಟೇ ಅಲ್ಲ ಇದು ಹೃದಯವನ್ನು ಕೂಡ ಆರೋಗ್ಯವಾಗಿಡುತ್ತದೆ. ಏಕೆಂದರೆ ಪೆಕ್ಟಿನ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೇಬಿನಲ್ಲಿರುವ ಪಾಲಿಫಿನಾಲ್‌ಗಳು ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಪಾರ್ಶ್ವವಾಯು ಅಪಾಯವನ್ನು ಸಹ ಕಡಿಮೆ ಮಾಡಲು ಸಹಕಾರಿಯಾಗಿವೆ. ಆಪಲ್ ಶಕ್ತಿಯುತವಾದ ಉತ್ಕರ್ಷಣ ನಿರೋಧಕವನ್ನು ಹೊಂದಿದೆ. ಇದು ಆಲ್ಝೈಮರ್‌ ಅಪಾಯವನ್ನು ಕಡಿಮೆ ಮಾಡುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...