ಡಿಜಿಟಲ್ ಡೆಸ್ಕ್ : ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಮತ್ತು ಅಧಿಕೃತ ಬಿಲ್ಲು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಯಾರಾದರೂ ನೇರವಾಗಿ ಬಂದು ಲೂಸ್ ಪ್ಯಾಕೇಟ್ಗಳಲ್ಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದ್ದಲ್ಲಿ ಅಂತಹ ಬಿತ್ತನೆ ಬೀಜಗಳನ್ನು ಖರೀದಿಸಬಾರದು ಎಂದು ಜಂಟಿ ಕೃಷಿ ನಿರ್ದೇಶಕ ಡಾ.ಕೆ.ಸೋಮಸುಂದರ್ ಅವರು ತಿಳಿಸಿದ್ದಾರೆ.
ಪ್ರಸ್ತಕ ಸಾಲಿನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲೆಯಲ್ಲಿ ಸರಿಯಾದ ಸಮಯಕ್ಕೆ ಬಿತ್ತನೆ ಕಾರ್ಯ ಪ್ರಾರಂಭವಾಗುವ ಅವಕಾಶವಿದೆ. ಹತ್ತಿ ಬೆಳೆಯುವ ರೈತರು ಹತ್ತಿ ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಅಧಿಕೃತ ಬಿಲ್ಲು ಪಡೆದು ಖರೀದಿಸಬೇಕು, ಯಾವುದೇ ಕಾರಣಕ್ಕೂ ಲೂಸ್ ಪ್ಯಾಕೇಟ್ಗಳಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಬಾರದು. ಅಂತಹ ಬೀಜ ಮಾರಾಟಗಾರರ ಕಂಡುಬಂದಲ್ಲಿ ಕೃಷಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.