ಬಳ್ಳಾರಿ : ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅವಶ್ಯವಿರುವ ಬಿತ್ತನೆ ಬೀಜಗಳಾದ ತೊಗರಿ, ಸಜ್ಜೆ, ನವಣೆ, ಜೋಳ, ಮೆಕ್ಕೆಜೋಳ, ಶೇಂಗಾ ಮುಂತಾದ ಬಿತ್ತನೆ ಬೀಜಗಳು ದಾಸ್ತಾನೀಕರಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ರೈತರು ಸಹಾಯಧನದಡಿ ಬಿತ್ತನೆ ಬೀಜ ಪಡೆಯಲು ತಮ್ಮ ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ಪುಸ್ತಕ ಪ್ರತಿ, ಪಹಣಿ ಹಾಗೂ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.ರೈತರು ಖಾಸಗಿ ಮಳಿಗೆಯಲ್ಲಿ ಬಿತ್ತನೆ ಬೀಜ ಖರೀದಿಸಿದರೆ ಕಡ್ಡಾಯವಾಗಿ ರಶೀದಿಯನ್ನು ಪಡೆಯಬೇಕು. ಬಿತ್ತನೆ ಬೀಜಗಳನ್ನು ಬಿತ್ತುವ ಮುನ್ನ ಬೀಜೋಪಚಾರ ಮಾಡುವುದರಿಂದ ಮುಂದೆ ಸಂಭವಿಸಬಹುದಾದ ರೋಗ ಹಾಗೂ ಕೀಟಭಾದೆ ತಡೆಗಟ್ಟಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.