alex Certify ಜಾನುವಾರುಗಳಿಗೆ ಕಂದುರೋಗ : ಆತಂಕದಲ್ಲಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾನುವಾರುಗಳಿಗೆ ಕಂದುರೋಗ : ಆತಂಕದಲ್ಲಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸೆ.11 ರಿಂದ 25 ರವರೆಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುತ್ತಿದೆ.

ಲಸಿಕಾದಾರರು ರೈತರ/ಪಶು ಪಾಲಕರ ಮನೆಬಾಗಿಲಲ್ಲೇ ಕರುಗಳಿಗೆ ಕಿವಿಯೋಲೆ ಅಳವಡಿಸಿ ನೊಂದಣಿ ಮಾಡಿಕೊಂಡು ಲಸಿಕೆ ಹಾಕುತ್ತಾರೆ. ಎಲ್ಲಾ ರೈತರು ಮತ್ತು ಪಶುಪಾಲಕರು ತಮ್ಮಲ್ಲಿರುವ ಅರ್ಹ ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕ ಡಾ|| ಶಿವಯೋಗಿ ಬಿ.ಯಲಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಂದು ರೋಗವು ಪ್ರಾಣಿಜನ್ಯವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭಸ್ರಾವದಿಂದ ಮತ್ತು ಹಸಿ ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಈ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ. ಆದ್ದರಿಂದ ಅರ್ಹ ಕರುಗಳಿಗೆ ಲಸಿಕೆ ಹಾಕಿಸಿ, ಸಂಭವಿಸಬಹುದಾದ ಆರ್ಥಿಕ ನಷ್ಟ ತಪ್ಪಿಸಿ ನಿಮ್ಮ ಜಾನುವಾರುಗಳನ್ನು ರಕ್ಷಿಸಿಕೊಳ್ಳುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲೂಕುವಾರು/ಗ್ರಾಮವಾರು ತಯಾರಿಸಲಾಗಿದ್ದು, ಪಶುಪಾಲನಾ ಇಲಾಖೆಯ ಅಧಿಕಾರಿ / ಸಿಬ್ಬಂದಿಯನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶುಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸುವುದು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...